ಗೊಂಡ (www.vknews.in): ಯೋಗ ಗುರು ಬಾಬಾ ರಾಮ್ದೇವ್ ಅವರ ‘ಸ್ವದೇಶಿ’ ಅಭಿಯಾನವು ಈಗ ನಕಲಿ ಉತ್ಪನ್ನಗಳು ಹಾಗೂ ವಿದೇಶಿ ಸರಕುಗಳನ್ನೂ ಒಳಗೊಂಡಿದೆ ಎಂದು ಬಿಜೆಪಿಯ ಮಾಜಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಆರೋಪಿಸಿದ್ದಾರೆ. ಗೊಂಡ ನಗರದ ಕಾಲೇಜೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಬ್ರಿಜ್ ಭೂಷಣ್ ಸಿಂಗ್, ರಾಮ್ದೇವ್ ಅವರ ಸ್ವದೇಶಿ ಅಭಿಯಾನದ ಕುರಿತು ತೀವ್ರ ವಾಗ್ದಾಳಿ ನಡೆಸಿದರು.
ದೇಶಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಆರಂಭವಾದ ಈ ಅಭಿಯಾನ ಆರಂಭದಲ್ಲಿ ಸಮರ್ಥನೀಯವಾಗಿತ್ತು. ಆದರೆ ಈಗ ವಿದೇಶಿ ಒಳಉಡುಪು ಸೇರಿದಂತೆ ವಿವಿಧ ಉತ್ಪನ್ನಗಳ ತಯಾರಿಕೆಯಲ್ಲಿ ತೊಡಗಿದ್ದಾರೆ ಎಂದು ವ್ಯಂಗ್ಯವಾಡಿದರು. ರಾಮ್ದೇವ್ ಅವರ ಹಿಂದಿನ ಸ್ವದೇಶಿ ಹೋರಾಟಗಳನ್ನು ಉಲ್ಲೇಖಿಸಿದ ಅವರು, ನಿಜವಾದ ಸ್ವದೇಶಿ ಚಳವಳಿಯನ್ನು ನಡೆಸುವ ಉದ್ದೇಶವಿದ್ದರೆ ಈ ಬಾರಿ ದೃಢ ಮತ್ತು ನಿರ್ಣಾಯಕ ಹೋರಾಟ ನಡೆಸಬೇಕು ಎಂದು ಸವಾಲು ಹಾಕಿದ್ದಾರೆ.
ಇದೇ ವೇಳೆ ದೇಶದಲ್ಲಿ ಕೃತಕ ತುಪ್ಪದ ಕುರಿತು ಕೇಳಿಬರುತ್ತಿರುವ ಗಂಭೀರ ಆರೋಪಗಳನ್ನೂ ಪ್ರಸ್ತಾಪಿಸಿದ ಬ್ರಿಜ್ ಭೂಷಣ್, ಈ ವಿಚಾರದಲ್ಲಿ ರಾಮ್ದೇವ್ ಹೊಣೆಹೊತ್ತು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಬ್ರಿಜ್ ಭೂಷಣ್ ಅವರ ಈ ಹೇಳಿಕೆ ಇದೀಗ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಆರೋಪಗಳಿಗೆ ಸಂಬಂಧಿಸಿದಂತೆ ರಾಮ್ದೇವ್ ಅಥವಾ ಅವರ ಸಂಸ್ಥೆಯಿಂದ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.