ಶಿವಮೊಗ್ಗ (www.vknews.in) : ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಉಚಿತ ನೋಟ್ಬುಕ್ಗಳನ್ನು ವಿತರಿಸುವ ಉದ್ದೇಶವಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಪಿಯು ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಗುತ್ತಿದೆ. ಮುಂದಿನ ಹಂತದಲ್ಲಿ ನೋಟ್ಬುಕ್ಗಳನ್ನೂ ಉಚಿತವಾಗಿ ನೀಡಲು ಸರ್ಕಾರ ಉದ್ದೇಶಿಸಿದೆ ಎಂದು ಅವರು ಹೇಳಿದರು.
ಶಿವಮೊಗ್ಗದ ಸರ್ಕಾರಿ ಪಿಯು ಕಾಲೇಜಿನ ‘ಕಲಾಂ ಸೆಂಟರ್’ಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಚಿವರು, ರಾಜ್ಯದ ಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಅಗತ್ಯ ಮೂಲಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.