ಮಂಗಳೂರು (www.vknews.in): ನದಿಗೆ ಬಿದ್ದ ಫುಟ್ಬಾಲ್ ತೆಗೆಯಲು ನದಿಗಿಳಿದ ಯುವಕನೊಬ್ಬ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನಗರದ ಹೊರವಲಯದ ಕಸಬಾ ಬೆಂಗ್ರೆಯ ಫೆರಿ ಪಾಯಿಂಟ್ ಬಳಿ ಭಾನುವಾರ ಸಂಜೆ ನಡೆದಿದೆ. ಮೃತರನ್ನು ಕಸಬಾ ಬೆಂಗ್ರೆ ನಿವಾಸಿ ಮುಹಮ್ಮದ್ ಸಾಲಿ ಹಾಗೂ ಝಹುರಾ ದಂಪತಿಯ ಪುತ್ರ ಮುಹಮ್ಮದ್ ಸನಾವುಲ್ಲಾ (25) ಎಂದು ಗುರುತಿಸಲಾಗಿದೆ.
ಫೆರಿ ಪಾಯಿಂಟ್ ಬಳಿ ಮಕ್ಕಳು ಫುಟ್ಬಾಲ್ ಆಡುತ್ತಿದ್ದ ವೇಳೆ ಚೆಂಡು ನದಿಗೆ ಬಿದ್ದಿತ್ತು. ಅದನ್ನು ತೆಗೆದುಕೊಡುವ ಉದ್ದೇಶದಿಂದ ಸನಾವುಲ್ಲಾ ಅವರು ನದಿಗೆ ಇಳಿದಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಹುಡುಕಾಟ ನಡೆಸಿದ್ದಾರೆ. ಬಳಿಕ ಸನಾವುಲ್ಲಾ ಅವರನ್ನು ನೀರಿನಿಂದ ಮೇಲಕ್ಕೆತ್ತಿ ಪ್ರಥಮ ಚಿಕಿತ್ಸೆ ನೀಡಿ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸನಾವುಲ್ಲಾ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.