ಧರ್ಮಪುರಿ | www.vknews.in: ತಮಿಳುನಾಡಿನ ಧರ್ಮಪುರಿಯಲ್ಲಿ ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ನಾಲ್ವರು ಮಕ್ಕಳು ವೇಗವಾಗಿ ಬಂದ ಹಾಲಿನ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ. ಸಂಬಂಧಿಕರೊಂದಿಗೆ ಮೇಕೆ ಮೇಯಿಸಲು ಬಂದಿದ್ದ ಮಕ್ಕಳು ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ವೇಳೆ ವೇಗವಾಗಿ ಬಂದ ಹಾಲಿನ ವ್ಯಾನ್ ನಿಯಂತ್ರಣ ತಪ್ಪಿ ಮಕ್ಕಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಚಾಲಕ ವಾಹನ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನೆಯಲ್ಲಿ ನಾಲ್ವರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದು, ಹತ್ತಿರದಲ್ಲಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಿಂದ ಪ್ರಜ್ಞಾಹೀನರಾದ ವ್ಯಕ್ತಿ ಹಾಗೂ ಮಗುವಿನ ಸಂಬಂಧಿ ಅಂಚಮ್ಮಾಳ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಬಳಿಕ ಪರಾರಿಯಾಗಿದ್ದ ಹಾಲಿನ ವ್ಯಾನ್ ಅನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಪರಾರಿಯಾಗಲು ಯತ್ನಿಸಿದ್ದ ಚಾಲಕ ಸರವಣಕುಮಾರ್ ಅವರನ್ನು ವಡಮದುರೈ ಪೊಲೀಸರು ಬಂಧಿಸಿದ್ದಾರೆ. ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದ ವಾಹನ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಆರೋಪದಡಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ. ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಮಕ್ಕಳನ್ನು ಕ್ಷಣಾರ್ಧದಲ್ಲಿ ಕಸಿದುಕೊಂಡ ಈ ದುರಂತದಿಂದ ಸ್ಥಳೀಯರಲ್ಲಿ ತೀವ್ರ ಆಘಾತ ಮತ್ತು ದುಃಖ ಆವರಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.