ಅಮೃತಸರ | www.vknews.in: ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಗುರ್ಪ್ರೀತ್ ಸಿಂಗ್ ಗೋಪಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಶನಿವಾರ ಸಂಜೆ ಫಿರೋಜ್ಪುರದಲ್ಲಿ ಈ ಘಟನೆ ನಡೆದಿದೆ. ಗುರ್ಪ್ರೀತ್ ಸಿಂಗ್ ಅವರು ಸ್ನೇಹಿತನೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಗುರ್ಪ್ರೀತ್ ಸಿಂಗ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದು, ಅವರ ಸ್ನೇಹಿತನಿಗೂ ಗುಂಡೇಟು ತಗುಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರ್ಪ್ರೀತ್ ಅವರ ಕೆಲವು ಸ್ನೇಹಿತರು ಮತ್ತೊಂದು ಕಾರಿನಲ್ಲಿ ಅವರ ಹಿಂದೆಯೇ ಬರುತ್ತಿದ್ದರು ಎನ್ನಲಾಗಿದ್ದು, ದುಷ್ಕರ್ಮಿಗಳು ಅವರ ಕಾರಿನ ಮೇಲೂ ಗುಂಡು ಹಾರಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಹಳೆಯ ಚುನಾವಣಾ ವಿವಾದದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ದಾಳಿಕೋರರನ್ನು ಪೊಲೀಸರು ಗುರುತಿಸಿದ್ದು, ಅವರ ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಘಟನೆ ಕುರಿತು ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ದಾಳಿಯ ಹಿಂದಿನ ನಿಖರ ಕಾರಣ ಹಾಗೂ ಇತರ ಆರೋಪಿಗಳ ಪಾತ್ರದ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.