ಬಂಟ್ವಾಳ | www.vknews.in: ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಸಜಿಪಮುನ್ನೂರು ಗ್ರಾಮದ ಮಾರ್ನಬೈಲು ಸಮೀಪದ ಕಂದೂರು–ಪೆಲತ್ತಕಟ್ಟೆ ಎಂಬಲ್ಲಿ ಆಗಸ್ಟ್ 30ರ ಭಾನುವಾರ ರಾತ್ರಿ ನಡೆದಿದೆ.
ಮೃತ ಯುವಕನನ್ನು ನಂದಾವರ–ಸುನ್ನೀನಗರ ನಿವಾಸಿ ಮುಹಮ್ಮದ್ ರಶೀಕ್ (25) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ರಶೀಕ್ ಅವರು ನಂದಾವರ ಶಾಲಾ ಸಮೀಪ ಗ್ಯಾರೇಜ್ ನಡೆಸುತ್ತಿದ್ದರು. ಭಾನುವಾರ ರಾತ್ರಿ ಸಜಿಪದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಪೆಲತ್ತಕಟ್ಟೆ ಬಳಿ ಆಟೋ ರಿಕ್ಷಾ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡ ರಶೀಕ್ ಅವರನ್ನು ಸ್ಥಳೀಯರು ತಕ್ಷಣ ದೇರಳಕಟ್ಟೆಯ ಕಣಚೂರು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳೀಯವಾಗಿ ಎಲ್ಲರೊಂದಿಗೂ ಉತ್ತಮ ಒಡನಾಟ ಹೊಂದಿದ್ದ ರಶೀಕ್ ಅವರ ಅಕಾಲಿಕ ನಿಧನದಿಂದ ನಂದಾವರದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಮೃತರು ತಂದೆ, ತಾಯಿ, ಸಹೋದರ–ಸಹೋದರಿ ಸೇರಿದಂತೆ ಅಪಾರ ಬಂಧು–ಬಳಗವನ್ನು ಅಗಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.