ಬೆಂಗಳೂರು (www.vknews.in): ರೈಲ್ವೆ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದ ಪರಿಣಾಮ ಅಜ್ಜಿ ಹಾಗೂ ಆಕೆಯ ಇಬ್ಬರು ಮೊಮ್ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ಸಮೀಪದ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಪಲನಜೋಗಹಳ್ಳಿ ಮೂಲದ ಇರ್ಫಾನಾ (46), ರುಕಿಯಾ (13) ಹಾಗೂ ರಾಕಿಯಾ (8) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ.
ರಜಾ ದಿನಗಳ ಹಿನ್ನೆಲೆಯಲ್ಲಿ ಹಿಂದೂಪುರದಿಂದ ಅಜ್ಜಿಯ ಮನೆಗೆ ಬಂದಿದ್ದ ಇಬ್ಬರು ಮಕ್ಕಳು, ಬಳಿಕ ಅಜ್ಜಿಯೊಂದಿಗೆ ಶಾಲೆಗೆ ಮರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ರೈಲು ನಿಲ್ದಾಣಕ್ಕೆ ತೆರಳಲು ಹಳಿ ದಾಟುತ್ತಿದ್ದ ಸಂದರ್ಭದಲ್ಲಿ ರೈಲು ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿ ಮೇಲ್ಸೇತುವೆ ಇಲ್ಲದಿರುವುದೇ ಹಳಿ ದಾಟಲು ಕಾರಣ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಯಶವಂತಪುರ ರೈಲ್ವೆ ಪೊಲೀಸರು ತನಿಖೆ ಆರಂಭಿಸಿದ್ದು, ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.