ಪುತ್ತೂರು (www.vknews.in): ಪತ್ರಿಕಾಗೋಷ್ಠಿ ನಡೆಸಲು ಪುತ್ತೂರು ಪ್ರೆಸ್ ಕ್ಲಬ್ಗೆ ಆಗಮಿಸಿದ್ದ ಹಕೀಂ ಕೂರ್ನಡ್ಕ ಅವರ ಸಂದರ್ಭದಲ್ಲೇ ಪ್ರೆಸ್ ಕ್ಲಬ್ ಹೊರಭಾಗದಲ್ಲಿ ತಂಡವೊಂದು ಜಮಾವಣೆಗೊಂಡು ಕೂಗಾಟ ನಡೆಸಿದ ಘಟನೆ ನಡೆದಿದೆ ಎನ್ನಲಾಗಿದೆ.
ಹಕೀಂ ಕೂರ್ನಡ್ಕ ಅವರು ಪ್ರೆಸ್ ಕ್ಲಬ್ನೊಳಗೆ ಇದ್ದ ವೇಳೆ ಹೊರಭಾಗದಲ್ಲಿ ಕೆಲವರು ಜಮಾವಣೆಗೊಂಡು ಕೂಗಾಟ ನಡೆಸಿದ್ದು, ಅವರನ್ನು ಹೊರಗೆ ಬರುವಂತೆ ಕರೆಯಲಾಗಿದೆ ಎಂದು ತಿಳಿದುಬಂದಿದೆ.
ಪರಿಸ್ಥಿತಿ ಉದ್ವಿಗ್ನಗೊಳ್ಳುವ ಸಾಧ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ಹಕೀಂ ಕೂರ್ನಡ್ಕ ಅವರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ಪುತ್ತೂರು ಪ್ರೆಸ್ ಕ್ಲಬ್ ಸುತ್ತಮುತ್ತ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಘಟನೆಗೆ ನಿಖರ ಕಾರಣ ಹಾಗೂ ಸಂಬಂಧಪಟ್ಟವರ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.