ಕೋಝಿಕ್ಕೋಡ್ (www.vknews.in): ರೈಲ್ವೆ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟಿರುವ ದಾರುಣ ಘಟನೆ ಮಾತೋಟ್ಟಂನಲ್ಲಿ ನಡೆದಿದೆ. ಮೃತರನ್ನು ಪೂಲಕಾಂಡಿಯ ನಿವಾಸಿ ನೌಫಾಲ್ ಎಂದು ಗುರುತಿಸಲಾಗಿದೆ. ಅವರು ಅರೀಕಾಡ್ನ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು.
ಮಂಗಳವಾರ ರಾತ್ರಿ ಸುಮಾರು 12 ಗಂಟೆಯ ವೇಳೆಗೆ ನೌಫಾಲ್ ರೈಲ್ವೆ ಹಳಿ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಹಳಿಯಲ್ಲಿ ಅಪಘಾತ ಸಂಭವಿಸಿರುವುದನ್ನು ಗಮನಿಸಿದ ಲೋಕೋ ಪೈಲಟ್ ತಕ್ಷಣ ರೈಲ್ವೆ ಪೊಲೀಸರಿಗೆ ಹಾಗೂ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಮತ್ತು ಸ್ಥಳೀಯರು ನಡೆಸಿದ ಹುಡುಕಾಟದಲ್ಲಿ ಬುಧವಾರ ಬೆಳಗ್ಗೆ ಸುಮಾರು 8 ಗಂಟೆಗೆ ರೈಲ್ವೆ ಹಳಿ ಸಮೀಪದ ಪೊದೆಯಲ್ಲಿ ನೌಫಾಲ್ ಅವರ ಮೃತದೇಹ ಪತ್ತೆಯಾಗಿದೆ.
ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಮಂಗಳವಾರ ಸಂಜೆ 4 ಗಂಟೆಗೆ ನಡುವಿಲಂಗಾಡಿ ಜುಮಾ ಮಸೀದಿ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.