ಬಿರ್ಭುಮ್ (www.vknews.in): ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರ ಸೊಸೆ ಬ್ರಿಸ್ಟಿ ಮುಖರ್ಜಿ (28) ಅವರು ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬಿರ್ಭುಮ್ ಜಿಲ್ಲೆಯಲ್ಲಿ ನಡೆದಿದೆ.
ಮಂಗಳವಾರ ಮಧ್ಯಾಹ್ನ ಘಟನೆ ಬೆಳಕಿಗೆ ಬಂದಿದ್ದು, ಬ್ರಿಸ್ಟಿ ಮುಖರ್ಜಿ ಅವರು ಮನೆಯ ಎರಡನೇ ಮಹಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬ್ರಿಸ್ಟಿ ಮುಖರ್ಜಿ ಅವರು ಮಮತಾ ಬ್ಯಾನರ್ಜಿ ಅವರ ಸೋದರಸಂಬಂಧಿ ನಿಹಾರ್ ಮುಖರ್ಜಿ ಅವರ ಪುತ್ರಿ ಎಂದು ತಿಳಿದುಬಂದಿದೆ.
ಘಟನೆ ಆತ್ಮಹತ್ಯೆಯೇ ಅಥವಾ ಇದರ ಹಿಂದೆ ಬೇರೆ ಯಾವುದೇ ಕಾರಣವಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದು, ಘಟನೆಯ ಸಂಪೂರ್ಣ ಮಾಹಿತಿ ತನಿಖೆಯ ಬಳಿಕವಷ್ಟೇ ಹೊರಬರಬೇಕಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.