ಸುಳ್ಯ (www.vknews.in): ಕೇರಳದ ಕೊಚ್ಚಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯ ಮೂಲದ ಯುವಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಪೆಲ್ತಡ್ಕ ನಿವಾಸಿ ಇಬ್ರಾಹಿಂ ಪಿ.ಎ. ಅವರ ಪುತ್ರ ಇಯಾಸ್ ಎಂದು ಗುರುತಿಸಲಾಗಿದೆ.
ಲಭ್ಯ ಮಾಹಿತಿಯ ಪ್ರಕಾರ, ಇಯಾಸ್ ಅವರು ನಿನ್ನೆ ರಾತ್ರಿ ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಇಯಾಸ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತ ಸಂಭವಿಸಿದ ನಿಖರ ಸ್ಥಳ, ಸಮಯ ಹಾಗೂ ಘಟನೆಯ ಇತರ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.