ಪುಂಜಾಲಕಟ್ಟೆ (www.vknews.in): ಮೂಡುಪಡುಕೋಡಿಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಟೋಬರ್ 31, 2026ರಂದು ನಡೆದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಝಾನಗರ ಕಲಾ ಬಾಗಿಲಿನ ಬುರೂಜ್ ಹೈಸ್ಕೂಲ್ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ಶಾಲೆಗೆ ಕೀರ್ತಿ ತಂದಿದ್ದಾರೆ. ವಿವಿಧ ವಿಭಾಗಗಳಲ್ಲಿ ಭಾಗವಹಿಸಿದ ಶಾಲೆಯ ಐವರು ವಿದ್ಯಾರ್ಥಿಗಳು ಬಹುಮಾನಗಳನ್ನು ಪಡೆದುಕೊಂಡಿದ್ದು, ಇಬ್ಬರು ಪ್ರಥಮ ಸ್ಥಾನ, ಇಬ್ಬರು ದ್ವಿತೀಯ ಸ್ಥಾನ ಹಾಗೂ ಓರ್ವ ವಿದ್ಯಾರ್ಥಿ ತೃತೀಯ ಸ್ಥಾನ ಗಳಿಸಿದ್ದಾರೆ.
ಪ್ರಥಮ ಸ್ಥಾನ:
ದ್ವಿತೀಯ ಸ್ಥಾನ:
ತೃತೀಯ ಸ್ಥಾನ:
ವಿದ್ಯಾರ್ಥಿಗಳ ಈ ಸಾಧನೆಗೆ ಬುರೂಜ್ ಶಾಲೆಯ ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದ್ದು, ಎಲ್ಲಾ ಬಹುಮಾನ ವಿಜೇತ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ. ವಿದ್ಯಾರ್ಥಿಗಳ ಪ್ರತಿಭೆ ಹಾಗೂ ಪರಿಶ್ರಮಕ್ಕೆ ಶಾಲಾ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.