ಮಲಪ್ಪುರಂ (www.vknews.in): ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರಿ ಮಾಡುತ್ತಿದ್ದ 10 ವರ್ಷದ ಬಾಲಕ ಮೃತಪಟ್ಟಿರುವ ದುರ್ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ತನೂರಿನಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಮೃತ ಬಾಲಕನನ್ನು ತನೂರು ಮೂಲಕ್ಕಲ್ ನಿವಾಸಿ ಫೈಸಲ್ ಅವರ ಪುತ್ರ ಮುಹಮ್ಮದ್ ಫಿನಾನ್ (10) ಎಂದು ಗುರುತಿಸಲಾಗಿದೆ.
ಶನಿವಾರ ಬೆಳಗ್ಗೆ ಮುಹಮ್ಮದ್ ಫಿನಾನ್ ತನ್ನ ಸಹೋದರನೊಂದಿಗೆ ಸೈಕಲ್ನಲ್ಲಿ ತೆರಳುತ್ತಿದ್ದ ವೇಳೆ ಟಿಪ್ಪರ್ ಲಾರಿ ಅವರ ಸೈಕಲ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಫಿನಾನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಅಪಘಾತದ ವೇಳೆ ಜೊತೆಯಲ್ಲಿದ್ದ ಆತನ ಸಹೋದರ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ಪುಟ್ಟ ಬಾಲಕನ ದುರಂತ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರು ತೀವ್ರ ದುಃಖಕ್ಕೊಳಗಾಗಿದ್ದಾರೆ. ಅಪಘಾತದ ಕುರಿತು ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.