ಕುಕ್ಕೆ ಸುಬ್ರಹ್ಮಣ್ಯ (www.vknews.in): ವೈಯಕ್ತಿಕ ಸಮಸ್ಯೆಗಳಿಂದಾಗಿ ನದಿಗೆ ಹಾರಿದ ಮಹಿಳೆಯೊಬ್ಬರ ಮೇಲೆ ಮೊಸಳೆ ದಾಳಿ ನಡೆಸಿದ ಘಟನೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸೇತುವೆ ಬಳಿ ನಡೆದಿದೆ. ಮಹಿಳೆಯ ಕಿರುಚಾಟ ಕೇಳಿದ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಆಕೆಯನ್ನು ರಕ್ಷಿಸಿದ್ದಾರೆ. ಬುಧವಾರ ರಾತ್ರಿ ಮಹಿಳೆ ಕುಮಾರಧಾರ ನದಿಗೆ ಹಾರಿದ್ದಾಳೆ ಎನ್ನಲಾಗಿದೆ. ಈ ವೇಳೆ ಮೊಸಳೆ ಆಕೆಗೆ ಕಚ್ಚಿದ್ದು, ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೊಸಳೆ ದಾಳಿಯಿಂದ ಗಾಯಗೊಂಡ ಮಹಿಳೆ ಸಹಾಯಕ್ಕಾಗಿ ಕಿರುಚಿಕೊಂಡಿದ್ದಾಳೆ. ಆಕೆಯ ಧ್ವನಿ ಕೇಳಿದ ಸಮೀಪದ ಲಾಡ್ಜ್ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ಮಹಿಳೆಯನ್ನು ನದಿಯಿಂದ ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ. ಬಳಿಕ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಮಹಿಳೆಗೆ ಪ್ರಥಮ ಚಿಕಿತ್ಸೆ ಹಾಗೂ ಕೌನ್ಸೆಲಿಂಗ್ ನೀಡಿದ ಬಳಿಕ ಪೊಲೀಸರು ಆಕೆಯನ್ನು ಕುಟುಂಬ ಸದಸ್ಯರೊಂದಿಗೆ ಕಳುಹಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.