ಪಾಲಕ್ಕಾಡ್ (www.vknews.in): ಕೇರಳದ ಪಾಲಕ್ಕಾಡ್ ಜಿಲ್ಲೆಯ ಮುಂಡೂರಿನಲ್ಲಿ ಮನೆ ನಿರ್ಮಾಣಕ್ಕಾಗಿ ಕಂಬ ಹಾಕಲು ತೋಡಿದ್ದ ಗುಂಡಿಗೆ ಬಿದ್ದು ಐದು ವರ್ಷದ ಬಾಲಕಿಯೊಬ್ಬಳು ದುರಂತ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿಯನ್ನು ಮುಂಡೂರು ನಿವಾಸಿಗಳಾದ ಜಗದೀಶ್ ಮತ್ತು ತುಳಸಿ ದಂಪತಿಯ ಪುತ್ರಿ ಅನುಶ್ರೀ ಎಂದು ಗುರುತಿಸಲಾಗಿದೆ.
ಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ಬಾಲಕಿ ಆಕಸ್ಮಿಕವಾಗಿ ಕಂಬಕ್ಕಾಗಿ ತೋಡಲಾಗಿದ್ದ ಗುಂಡಿಗೆ ಬಿದ್ದಿದ್ದಾಳೆ ಎನ್ನಲಾಗಿದೆ. ಘಟನೆಯ ಬಳಿಕ ಬಾಲಕಿಯ ಮೃತದೇಹವನ್ನು ಪಾಲಕ್ಕಾಡ್ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಘಟನೆಯಿಂದ ಕುಟುಂಬಸ್ಥರು ಹಾಗೂ ಸ್ಥಳೀಯರು ತೀವ್ರ ದುಃಖಿತರಾಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.