ಕೊಚ್ಚಿ (www.vknews.in): ಕೇರಳದ ಎರ್ನಾಕುಲಂ ಜಿಲ್ಲೆಯ ಆಲುವಾ ತಾಲೂಕಿನ ಮುಪ್ಪತಾಡಂನಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ 11 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕನನ್ನು ಪಣಯಕ್ಕುಲಂನ ವಲಿಯಪರಂಬಿಲ್ ನಿವಾಸಿ ರಫೀಕ್ ಅವರ ಪುತ್ರ ಅಮಾನುಲ್ಲಾ ಹ್ಯಾರಿಸ್ ಎಂದು ಗುರುತಿಸಲಾಗಿದೆ. ಈತ ಆಲುವಾದ ಸೇಂಟ್ ಫ್ರಾನ್ಸಿಸ್ ಶಾಲೆಯ ಆರನೇ ತರಗತಿ ವಿದ್ಯಾರ್ಥಿಯಾಗಿದ್ದನು.
ಮುಪ್ಪತಾಡಂನ ಒಂಜತೋಡ್ ಸೇತುವೆ ಸಮೀಪ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಟ್ಯೂಷನ್ ಮುಗಿಸಿ ಸೈಕಲ್ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಹ್ಯಾರಿಸ್ಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದನು. ತಕ್ಷಣವೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಅಪಘಾತದ ಬಳಿಕ ಲಾರಿ ಚಾಲಕ ಪ್ರೇಜು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಲಾರಿಯನ್ನೂ ವಶಪಡಿಸಿಕೊಂಡಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತದ ಕುರಿತು ತನಿಖೆ ಆರಂಭಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.