ತಲಪಾಡಿ (www.vknews.in): ನೂರಾನಿ ಯತೀಮ್ ಖಾನ್ ಮತ್ತು ದಾರುಲ್ ಮಸಾಕೀನ್ ಸಂಸ್ಥೆಯ ಗೌರವಾನ್ವಿತ ಅಧ್ಯಕ್ಷರಾದ ಹಾಜಿ ಯು. ಎಸ್. ಅಬೂಬಕ್ಕರ್ ಅವರು ಪ್ರತಿಷ್ಠಿತ 70ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಹಿನ್ನೆಲೆಯಲ್ಲಿ ಕೆಎಂ ಬೋರ್ಡ್ಸ್ ತಲಪಾಡಿ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಗಿದೆ. ಸಮಾಜ ಸೇವಾ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಗಣನೀಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿರುವುದು ಸಂತಸದ ಹಾಗೂ ಹೆಮ್ಮೆಯ ವಿಷಯವಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಅವರ ನಿಸ್ವಾರ್ಥ ಸಮಾಜಸೇವೆ, ಮಾನವೀಯ ಕಾಳಜಿ ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯ ಕೊಡುಗೆಗಳು ಸಮಾಜದ ಎಲ್ಲರಿಗೂ ಸದಾ ಪ್ರೇರಣೆಯಾಗಿವೆ. ಇಂತಹ ಗೌರವಾನ್ವಿತ ಪ್ರಶಸ್ತಿಗೆ ಪಾತ್ರರಾಗಿರುವುದು ಸಂಸ್ಥೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಅಭಿನಂದನಾ ಸಂದೇಶದಲ್ಲಿ ತಿಳಿಸಲಾಗಿದೆ.
ಕೆಎಂ ಬೋರ್ಡ್ಸ್ ತಲಪಾಡಿಯ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳ ಪರವಾಗಿ ಹಾಜಿ ಯು. ಎಸ್. ಅಬೂಬಕ್ಕರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದು, ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಮುಂದಿನ ದಿನಗಳಲ್ಲಿಯೂ ಸಮಾಜಸೇವೆಯಲ್ಲಿ ಹೆಚ್ಚಿನ ಯಶಸ್ಸು ಲಭಿಸಲಿ ಎಂದು ಹಾರೈಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.