ಮೈಸೂರು (www.vknews.in): ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಮೂರು ದಶಕಗಳ ಗಣನೀಯ ಸೇವೆಯನ್ನು ಗುರುತಿಸಿ, ಮೈಸೂರು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ 2026ನೇ ಸಾಲಿನ 71ನೇ ಕನ್ನಡ ರಾಜ್ಯೋತ್ಸವ ಪುರಸ್ಕಾರಕ್ಕೆ ಡಾ. ಅವರೆಕಾಡು ವಿಜಯಕುಮಾರ್ ಅವರು ಭಾಜನರಾಗಿದ್ದಾರೆ.
ಪ್ರಸ್ತುತ ಮೈಸೂರಿನ ಪ್ರತಿಷ್ಠಿತ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಭಾಷಾಂತರ ಅಧ್ಯಯನ ವಿಭಾಗದಲ್ಲಿ ಸಂಯೋಜನಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರು, ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಭಾಷಾವಿಜ್ಞಾನ ಹಾಗೂ ಭಾಷಾಂತರ ಅಧ್ಯಯನ ಕ್ಷೇತ್ರಗಳಲ್ಲಿ ಮಹತ್ವದ ಸಂಶೋಧನೆಗಳನ್ನು ನಡೆಸಿದ್ದಾರೆ.
ಈ ಕ್ಷೇತ್ರಗಳಿಗೆ ಸಂಬಂಧಿಸಿದಂತೆ 20ಕ್ಕೂ ಅಧಿಕ ಕೃತಿಗಳನ್ನು ಪ್ರಕಟಿಸಿರುವ ಡಾ. ವಿಜಯಕುಮಾರ್ ಅವರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ವಿವಿಧ ಉಪನ್ಯಾಸಗಳನ್ನು ನೀಡಿ ಶೈಕ್ಷಣಿಕ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ 30 ವರ್ಷಗಳ ಸುದೀರ್ಘ ಹಾಗೂ ಗಣನೀಯ ಸೇವೆಯನ್ನು ಪರಿಗಣಿಸಿ ಜಿಲ್ಲಾಡಳಿತ ಈ ಪುರಸ್ಕಾರ ನೀಡಿ ಗೌರವಿಸಿದೆ. ಡಾ. ಅವರೆಕಾಡು ವಿಜಯಕುಮಾರ್ ಅವರು ಮೂಲತಃ ಮೈಸೂರು ನಗರದ ಬೋಗಾದಿ ಗ್ರಾಮದ ನಿವಾಸಿಯಾಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.