ನವದೆಹಲಿ (www.vknews.in): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತಮ್ಮ ಫೋನ್ ಟ್ಯಾಪ್ ಮಾಡುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ವಿದೇಶಿ ಶಕ್ತಿಗಳ ನಿಯಂತ್ರಣದಲ್ಲಿರುವ ಮತ್ತು ರಾಷ್ಟ್ರವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರ ಬಗ್ಗೆ ತಮ್ಮ ಬಳಿ ಪುರಾವೆಗಳಿವೆ ಎಂದು ಹೇಳಿರುವ ಅವರು, ಈ ವಿಚಾರವಾಗಿ ಪ್ರಧಾನಿಯೊಂದಿಗೆ ಬಹಿರಂಗ ಚರ್ಚೆ ನಡೆಸಲು ಮತ್ತೊಮ್ಮೆ ಸವಾಲು ಹಾಕಿದ್ದಾರೆ. ಕಾಂಗ್ರೆಸ್ ತನ್ನ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ರಾಹುಲ್ ಗಾಂಧಿ ಈ ಆರೋಪ ಹಾಗೂ ಸವಾಲನ್ನು ಪುನರುಚ್ಚರಿಸಿದ್ದಾರೆ.
“ವಿದೇಶಿ ಶಕ್ತಿಗಳ ನಿಯಂತ್ರಣದಲ್ಲಿರುವವರು ಯಾರು? ಅವರು ಎಷ್ಟು ಸಮಯದಿಂದ ರಾಷ್ಟ್ರವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ? ಈ ಎಲ್ಲ ವಿಚಾರಗಳು ಮುಕ್ತ ಚರ್ಚೆಯ ಮೂಲಕ ಹೊರಬರಲಿವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಈ ವಿಚಾರ ಪ್ರಧಾನಿಗೂ ತಿಳಿದಿದೆ. ಏಕೆಂದರೆ ತಮ್ಮ ಫೋನ್ ಟ್ಯಾಪ್ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ತಮ್ಮ ಸವಾಲು ಇನ್ನೂ ಹಾಗೆಯೇ ಉಳಿದಿದೆ ಎಂದು ಹೇಳಿರುವ ರಾಹುಲ್, ಪ್ರಧಾನಿ ನೇರ ಚರ್ಚೆಗೆ ಸಿದ್ಧರಾದ ದಿನ ಈ ಎಲ್ಲ ಸಂಗತಿಗಳು ಬಹಿರಂಗವಾಗಲಿವೆ ಎಂದು ತಿಳಿಸಿದ್ದಾರೆ.
“ಯಾರು ವಿದೇಶಿ ಶಕ್ತಿಗಳ ನಿಯಂತ್ರಣದಲ್ಲಿದ್ದಾರೆ, ಯಾರು ರಾಷ್ಟ್ರವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಮತ್ತು ಎಷ್ಟು ಸಮಯದಿಂದ ಈ ಚಟುವಟಿಕೆಗಳು ನಡೆಯುತ್ತಿವೆ ಎಂಬುದು ಚರ್ಚೆಯ ಮೂಲಕ ಜನರಿಗೆ ತಿಳಿಯಲಿದೆ. ಪ್ರಧಾನಿ ನನ್ನೊಂದಿಗೆ ಚರ್ಚೆಗೆ ಸಿದ್ಧರಾಗಲಿ. ಯಾವಾಗ ಬೇಕಾದರೂ, ಎಲ್ಲಿಯಾದರೂ ನಾನು ಚರ್ಚೆಗೆ ಸಿದ್ಧನಿದ್ದೇನೆ” ಎಂದು ರಾಹುಲ್ ಗಾಂಧಿ ಸವಾಲು ಹಾಕಿದ್ದಾರೆ. ಪ್ರಧಾನಿ ಮೋದಿ ವಿರುದ್ಧದ ಈ ಆರೋಪ ಹಾಗೂ ಬಹಿರಂಗ ಚರ್ಚೆಗೆ ನೀಡಿರುವ ಸವಾಲು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.