ಮಂಡ್ಯ (www.vknews.in): ರೈಲ್ವೆ ಗೇಟ್ ಮುಚ್ಚಿದ್ದರೂ ಹಳಿ ದಾಟಲು ಪ್ರಯತ್ನಿಸಿದ 19 ವರ್ಷದ ಯುವತಿಯೊಬ್ಬರು ರೈಲು ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಮೃತ ಯುವತಿಯನ್ನು ಚಂದಗಿರಿಕೊಪ್ಪಲು ಗ್ರಾಮದ ನಿವಾಸಿ ಲಿಖಿತಾ (19) ಎಂದು ಗುರುತಿಸಲಾಗಿದೆ. ಗ್ರಾಮದ ಸಮೀಪದ ರೈಲ್ವೆ ಲೆವೆಲ್ ಕ್ರಾಸಿಂಗ್ನಲ್ಲಿ ರೈಲು ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ಗೇಟ್ ಮುಚ್ಚಲಾಗಿತ್ತು. ಈ ವೇಳೆ ಗೇಟ್ ತೆರೆಯುವವರೆಗೆ ಕಾಯದೆ ಲಿಖಿತಾ ರೈಲ್ವೆ ಹಳಿ ದಾಟಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಈ ದೃಶ್ಯಗಳು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿವೆ ಎಂದು ವರದಿಯಾಗಿದೆ.
ಹಳಿ ದಾಟುವ ಸಂದರ್ಭದಲ್ಲಿ ರೈಲು ಡಿಕ್ಕಿ ಹೊಡೆದ ಪರಿಣಾಮ ಲಿಖಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ತಿಳಿದು ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.