ಶಿವಮೊಗ್ಗ (www.vknews.in): ಹೋರಿ ಬೆದರಿಸುವ ಸ್ಪರ್ಧೆಯ ವೇಳೆ ಹೋರಿ ತಿವಿದು ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಕಲ್ಮನೆ ಚುಂಚನಕೊಪ್ಪ ಹಾಗೂ ಚುರ್ಚುಗುಂಡಿ ಗ್ರಾಮಗಳಲ್ಲಿ ನಡೆದ ಪ್ರತ್ಯೇಕ ಸ್ಪರ್ಧೆಗಳ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಕಲ್ಮನೆ ಚುಂಚನಕೊಪ್ಪ ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯ ವೇಳೆ ಹೋರಿ ತಿವಿದು 48 ವರ್ಷದ ಈರಪ್ಪ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇನ್ನೊಂದೆಡೆ, ಚುರ್ಚುಗುಂಡಿ ಗ್ರಾಮದಲ್ಲಿ ನಡೆದ ಸ್ಪರ್ಧೆಯ ಸಂದರ್ಭದಲ್ಲೂ ಹೋರಿ ತಿವಿತಕ್ಕೆ ಅರುಣ್ ಎಂಬವರು ಬಲಿಯಾಗಿದ್ದಾರೆ.
ಶಿಕಾರಿಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
ಎರಡೂ ಘಟನೆಗಳು ಶಿಕಾರಿಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿವೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.