ಪುತ್ತೂರು (www.vknews.in) : ಮುಂದಿನ ಶೈಕ್ಷಣಿಕ ವರ್ಷದಿಂದ ಬಿಳುವಾರಿನಲ್ಲಿರುವ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಆರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಮುಕ್ರಂಪಾಡಿ ಸರಕಾರಿ ಬಾಲಕಿಯರ ಪ ಪೂ ಕಾಲೇಜಿನ ನೂತನ ಸಭಾ ಭವನ ಉದ್ಘಾಟನೆ ಮಾಡಿ ಮಾತನಾಡಿದರು.
ಮುಕ್ರಂಪಾಡಿ ಸರಕಾರಿಮಹಿಳಾ ಪಿ ಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಇದ್ದು ಇದೇ ವಿದ್ಯಾರ್ಥಿಗಳಿಗೆ ಪದವಿ ಕಲಿಯುವ ವೇಳೆ ಸೈನ್ಸ್ ಅಗತ್ಯವಿದ್ದು ಅದಕ್ಕೆ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಮುಕ್ರಂಪಾಡಿ ಬಾಲಕಿಯರ ಪ ಪೂ ಕಾಲೇಜು ನಾನು ಶಾಸಕನಾದ ಮೊದಲ ಅವಧಿಯಲ್ಲಿ ಇಲ್ಲ ಎಲ್ಲದರ ಕೊರತೆ ಇತ್ತು ಈಗ ಅದನ್ನು ಸಂಪೂರ್ಣವಾಗಿ ನೀಗಿಸಲಾಗಿದೆ. ಗ್ರಾಮೀಣ ವಿದ್ಯಾರ್ಥಿನಿಯರಿಗೆ ಈ ಕಾಲೇಜು ಹೆಚ್ಚು ಪ್ರಯೋಜನವಾಗುತ್ತಿದೆ ಎಂದು ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.