ಮಂಗಳೂರು (www.vknews.in): ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕ್ಆಫ್ ಆಗುವ ಸಂದರ್ಭದಲ್ಲಿ ವಿಮಾನದ ಇಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ಪೈಲಟ್ನ ಸಮಯಪ್ರಜ್ಞೆಯಿಂದ ತಪ್ಪಿದೆ. ವಿಮಾನದಲ್ಲಿದ್ದ 229 ಪ್ರಯಾಣಿಕರು ಹಾಗೂ 7 ಮಂದಿ ಸಿಬ್ಬಂದಿ ಸೇರಿದಂತೆ ಒಟ್ಟು 236 ಮಂದಿ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.
ಸೋಮವಾರ ಸಂಜೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಬೇಕಿದ್ದ ಇಂಡಿಗೋ ವಿಮಾನದಲ್ಲಿ ಈ ಘಟನೆ ನಡೆದಿದೆ. ಸಂಜೆ 6:05ಕ್ಕೆ ವಿಮಾನ ಟೇಕ್ಆಫ್ ಆಗಬೇಕಿತ್ತು. ರನ್ವೇಯಲ್ಲಿ ಟೇಕ್ಆಫ್ ಪ್ರಕ್ರಿಯೆ ನಡೆಯುತ್ತಿದ್ದ ವೇಳೆ ವಿಮಾನದ ಇಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎನ್ನಲಾಗಿದೆ. ತಕ್ಷಣ ಪರಿಸ್ಥಿತಿಯನ್ನು ಅರಿತ ಪೈಲಟ್, ವಿಮಾನ ಟೇಕ್ಆಫ್ ಆಗುವ ಕೊನೆಯ ಕ್ಷಣದಲ್ಲಿ ಬ್ರೇಕ್ ಹಾಕಿ ವಿಮಾನವನ್ನು ನಿಲ್ಲಿಸಿದ್ದಾರೆ. ಇದರಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತ ತಪ್ಪಿದೆ.
ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ ಸಿಬ್ಬಂದಿ
ವಿಮಾನ ನಿಂತ ಬಳಿಕ ಅದರಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಬಳಿಕ ಇಂಡಿಗೋ ಸಂಸ್ಥೆಯು ಪ್ರಯಾಣಿಕರ ಪ್ರಯಾಣ ಮುಂದುವರಿಸಲು ಬದಲಿ ವಿಮಾನದ ವ್ಯವಸ್ಥೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪೈಲಟ್ನ ಸಮಯಪ್ರಜ್ಞೆ ಹಾಗೂ ತಕ್ಷಣದ ಕ್ರಮದಿಂದ 236 ಮಂದಿ ಅಪಾಯದಿಂದ ಪಾರಾಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.