ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ಶಿಡ್ಲಘಟ್ಟ ನಗರದ ಡಾಲ್ಫಿನ್ ಶಾಲೆಯಲ್ಲಿ ಡಿಸಿಸಿ ಬ್ಯಾಂಕ್ ಹಾಗೂ ಶಿಡ್ಲಘಟ್ಟ ನಗರದ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ(ಎಸ್.ಎಫ್.ಸಿ.ಎಸ್ ಬ್ಯಾಂಕ್) ವತಿಯಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ ಮೇ 27 ಬುಧವಾರದಂದು ಸಾಲ ವಿತರಣಾ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಬ್ಯಾಂಕಿನ ಸಿಇಓ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಬೆಳಿಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ,ಶಾಸಕ ವಿ.ಮುನಿಯಪ್ಪ,ಬ್ಯಾಂಕಿನ ಅಧ್ಯಕ್ಷರು-ನಿರ್ದೇಶಕರು ಭಾಗವಹಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.