(www.Vknews.in): ಕೆಸಿ ರೋಡ್ ನಿಂದ ತಲಪಾಡಿ ವರೆಗೆ ಸರ್ವಿಸ್ ರಸ್ತೆ ನಿರ್ಮಿಸಬೇಕು ಮತ್ತು ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಯಲ್ಲಿ ಸುಸಜ್ಜಿತ ಬಸ್ ತಂಗುದಾಣವನ್ನು ನಿರ್ಮಿಸಬೇಕು ಎಂದು ಒತ್ತಾಯಿಸಿ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಹಕ್ಕೊತ್ತಾಯ ಸಭೆ ನಡೆಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಇದಕ್ಕೂ ಮುಂಚೆ ಕೆಸಿ ರೋಡ್ ಜಂಕ್ಷನ್ ನಲ್ಲಿ ಸೇರಿದ ಊರಿನ ಪ್ರಮುಖರು ಹಲವು ಬಾರಿ ಹೋರಾಟ ನಡೆಸಿದರೂ ಇಲ್ಲಿನ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಸಮಸ್ಯೆಗಳು ಪರಿಹಾರವಾಗುತ್ತಿಲ್ಲ. ಸರ್ವಿಸ್ ರಸ್ತೆ ಇಲ್ಲದೇ ಇರುವ ಕಾರಣ ಅಪಘಾತಗಳು ಆಗಾಗ ಸಂಭವಿಸುತ್ತಿವೆ ಎಂದು ಆರೋಪಿಸಿದರು. ಹೀಗಾಗಿ ಸಂಬಂಧ ಪಟ್ಟ ಇಲಾಖೆ ಮತ್ತು ಅಧಿಕಾರಿಗಳು ಕೂಡಲೇ ಎಚ್ಚೆತ್ತು ಇಲ್ಲಿ ಸರ್ವಿಸ್ ರಸ್ತೆ ಮತ್ತು ಬಸ್ಸು ತಂಗುದಾಣ ನಿರ್ಮಿಸಲು ಮುಂದಾಗಬೇಕೆಂದು ಒತ್ತಾಯಿಸಿದರು.
ಸಭೆಯಲ್ಲಿ ತಾಪಂ ಸದಸ್ಯಸಿದ್ದೀಕ್ ತಲಪಾಡಿ, ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಅಧ್ಯಕ್ಷ ಅಶ್ರಫ್ ಕೆಸಿ ರೋಡ್, ಕೋಟೆಕಾರ್ ಪಟ್ಟಣ ಪಂಚಾಯತ್ ಸದಸ್ಯ ಮೊಯ್ದಿನ್ ಬಾವ , ಸಾಮಾಜಿಕ ಕಾರ್ಯಕರ್ತ ಅಬ್ಬಾಸ್ ಉಚ್ಚಿಲ್, ದಲಿತ ಹಕ್ಕುಗಳ ಸಮಿತಿ ಅಧ್ಯಕ್ಷ ನಾರಾಯಣ ತಲಪಾಡಿ , ಕಾಂಗ್ರೆಸ್ ಮುಖಂಡ ಅಬ್ದುಲ್ ಸತ್ತಾರ್ ( ಸದ್ದಾಮ್ ) , ಡಿಸಿಸಿ ಸದಸ್ಯ ಬಿ.ಎಸ್ ಇಸ್ಮಾಯಿಲ್, ಕಾರ್ಮಿಕ ಸಂಘಟನೆಗಳ ಮುಖಂಡರಾದ ಟಿ. ಇಸ್ಮಾಯಿಲ್ ,ಇಬ್ರಾಹಿಂ ಮದಕ, ತಲಪಾಡಿ ಬಿಲಾಲ್ ಮಸೀದಿಯ ಅಧ್ಯಕ್ಷ ಯಾಕೂಬ್ , ಪಿಲಿಕೂರು ಮಸೀದಿ ಅಧ್ಯಕ್ಷರಾದ ಬಾವುಚ್ಚ, ಅಬ್ಬು ಹಾಜಿ ಕೆಸಿಆರ್, ಹಾರೂನ್ ಉಚ್ಚಿಲ್, ಫಾರೂಕ್ ಕೆಸಿ ರೋಡ್ ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.