ಬಾಗ್ದಾದ್(ವಿಶ್ವಕನ್ನಡಿಗ ನ್ಯೂಸ್): ಇರಾಕ್’ನ ಬಗ್ದಾದ್’ನ ಇಬ್ನ್ ಖತೀಬ್ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 82 ಮಂದಿ ಮೃತಪಟ್ಟಿದ್ದು, ಹಲವಾರು ಜನರ ಗಾಯಗೊಂಡಿದ್ದಾರೆ.
ಕೋವಿಡ್ ರೋಗಿಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಯೊಂದರಲ್ಲಿ ಈ ಅವಘಡ ಸಂಭವಿಸಿದೆ. ಆಸ್ಪತ್ರೆಯ ಆಡಳಿತಾಧಿಕಾರಿಗಳ ನಿರ್ಲಕ್ಷವೇ ಅಗ್ನಿ ದುರಂತಕ್ಕೆ ಕಾರಣವೆಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.
ಆಸ್ಪತ್ರೆಯ ವಾರ್ಡ್ ಒಂದರಲ್ಲಿ ಆಮ್ಲಜನಕದ ಸಿಲಿಂಡರ್ ಸ್ಪೋಟಿಸಿದ್ದರಿಂದ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡಿತೆಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆಯುತ್ತಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.