(ವಿಶ್ವ ಕನ್ನಡಿಗ ನ್ಯೂಸ್) ಶಿಕಾರಿಪುರ : ಕರ್ನಾಟಕ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಶಿಕಾರಿಪುರದಲ್ಲಿ ಶುಕ್ರವಾರದಂದು ತ್ರೈಮಾಸಿಕ ಕೆ.ಡಿ.ಪಿ.ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಲೋಕಸಭಾ ಸದಸ್ಯ ಬಿ. ವೈ. ರಾಘವೇಂದ್ರ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ , ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಎಸ್ಪಿ ಲಕ್ಷ್ಮೀ ಪ್ರಸಾದ್, ಸಿಇಒ ವೈಶಾಲಿ ಮತ್ತಿತರರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಡೆಸಿದ ಶಿಕಾರಿಪುರ ತಾಲೂಕು ತ್ರೈಮಾಸಿಕ ಕೆಡಿಪಿ ಸಭೆ ಮುಖ್ಯಾಂಶಗಳು:-
ಮುಂದಿನ ಎರಡು ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಲಭ್ಯವಾಗಲಿದೆ.
ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.5ಕ್ಕಿಂತ ಕಡಿಮೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿಯೂ ಕರೋನಾ ಪ್ರಮಾಣ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು.
ಸಂಕಷ್ಟದಲ್ಲಿರುವ ವಿವಿಧ ವರ್ಗಗಳ ಜನರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಬಿಡುಗಡೆ ಮಾಡಲಾಗುತ್ತಿದ್ದು, ಇದನ್ನು ಬ್ಯಾಂಕುಗಳು ಹಳೆ ಸಾಲಕ್ಕೆ ಮುರಿದುಕೊಳ್ಳದಂತೆ ಸ್ಪಷ್ಟ ಸೂಚನೆ ನೀಡಲಾಗಿದೆ. ಇದನ್ನು ಉಲ್ಲಂಘಿಸುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.