ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಅಸೀಲ್ ಅಕ್ರಮ್ ನೇತೃತ್ವದ ಉಡುಪಿ ಜಿಲ್ಲಾ ನಿಯೋಗವು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವಲ್ಲಿ ಸರಕಾರದ ನಿರ್ಲಕ್ಷ್ಯದ ಬಗ್ಗೆ ಎಸ್.ಡಿ.ಪಿ.ಐ ಉಡುಪಿ ಜಿಲ್ಲಾಧ್ಯಕ್ಷರಾದg ಇಲ್ಯಾಸ್ ಸಾಸ್ತಾನ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಜಿಲ್ಲೆಗೆ ಆಗಿರುವ ಅನ್ಯಾಯದ ವಿರುದ್ಧ , ಸರಕಾರಿ ಮೆಡಿಕಲ್ ಕಾಲೇಜಿಗಾಗಿ ನಮ್ಮ ಆಂದೋಲನಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಮಸೂದ್ ಮನ್ನಾ ಮತ್ತು ಜಿಲ್ಲಾ ಸಮಿತಿ ಸದಸ್ಯರಾದ ನಝ್ ಹತ್ ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.