ಮಂಗಳೂರು ,(ವಿಶ್ವ ಕನ್ನಡಿಗ ನ್ಯೂಸ್ ) :ನಗರದ ಖಾಸಗಿ ಆಸ್ಪತ್ರೆಗೆ ತೀವ್ರ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರದ ಮಾಜಿ ಸಚಿವ, ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯವನ್ನು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಚಾರಿಸಿದರು. ಆಸ್ಕರ್ ಫೆರ್ನಾಂಡಿಸ್ ದಾಖಲಾಗಿದ್ದ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆಸ್ಪತ್ರೆ ಹಿರಿಯ ವೈದ್ಯರ ಜತೆ ಸಮಾಲೋಚನೆ ನಡೆಸಿದರು.ಆಸ್ಪತ್ರೆ ಭೇಟಿ ಬಳಿಕ ಮಾಧ್ಯಮಕ್ಕೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ “ಆಸ್ಕರ್ ಅವರ ಆರೋಗ್ಯ ಹದಗೆಟ್ಟಿಲ್ಲ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ತಜ್ಞ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ದೆಹಲಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡೋ ಅಗತ್ಯ ಇಲ್ಲ ಎಂದರು”.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.