ಕುಂದಾಪುರ,(ವಿಶ್ವ ಕನ್ನಡಿಗ ನ್ಯೂಸ್ ): ಸೈಕಲ್ ಗೆ ಕಾರೊಂದು ಢಿಕ್ಕಿಯಾದ ಪರಿಣಾಮ ಸೈಕಲ್ ಸವಾರ ಸಾವನ್ನಪ್ಪಿದ ಘಟನೆ ಇಲ್ಲಿನ ಹೆಮ್ಮಾಡಿ ಸಮೀಪದ ಜಾಲಾಡಿಯಲ್ಲಿ ನಡೆದಿದೆ.ಹೆಮ್ಮಾಡಿಯ ಸಂತೋಷನಗರ ನಿವಾಸಿ ರಾಮ ಕುಲಾಲ್(60) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ.ಅವರು ಹೆಮ್ಮಾಡಿಯಿಂದ ತಮ್ಮ ಸೈಕಲ್ ನಲ್ಲಿ ತಲ್ಲೂರಿಗೆ ತೆರಳುತ್ತಿರುವ ಸಂದರ್ಭ ಬೈಂದೂರು ಕಡೆಯಿಂದ ಕುಂದಾಪುರದತ್ತ ತೆರಳುತ್ತಿದ್ದ ಕಾರು ಸೈಕಲ್ ಗೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಸೈಕಲ್ನಲ್ಲಿದ್ದ ರಾಮ ಕುಲಾಲ್ ಅವರು ಕೆಲ ದೂರ ಹೋಗಿ ಬಿದ್ದ ಪರಿಣಾಮ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿತ್ತು. ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಿದರಾದರೂ ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಈರ್ವರು ಪುತ್ರಿಯರನ್ನು ಅಗಲಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.