(ವಿಶ್ವ ಕನ್ನಡಿಗ ನ್ಯೂಸ್) : ಪುತ್ರ ವೇದಾಂತ್ ಗಾಗಿ ಮತ್ತೆ ಮದುವೆಯಾಗಿರುವುದಾಗಿ ಬಹುಭಾಷಾ ನಟ ಪ್ರಕಾಶ್ ರೈ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದ್ದಾರೆ.
ಪ್ರಕಾಶ್ ರೈ ಅವರು 11 ವರ್ಷಗಳ ಹಿಂದೆ ನೃತ್ಯ ನಿರ್ದೇಶಕಿ ಪೋನಿ ವರ್ಮಾ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು. ತಮ್ಮ 11ನೇ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪುತ್ರ ವೇದಾಂತ್ ಗಾಗಿ ಅವರು ಮತ್ತೊಮ್ಮೆ ಪೋನಿ ವರ್ಮಾ ಅವರನ್ನೇ ವಿವಾಹವಾಗಿದ್ದಾರೆ.
ತಮ್ಮ ಪುತ್ರ ವೇದಾಂತ್ ಗಾಗಿ ಈ ಮದುವೆಯನ್ನು ಏರ್ಪಡಿಸಲಾಗಿತ್ತು ಎಂದು ಪ್ರಕಾಶ್ ರೈ ಅವರು ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿ, ವಿವಾಹದ ಫೋಟೋವನ್ನು ಹಂಚಿಕೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.