ಉಡುಪಿ ,(ವಿಶ್ವ ಕನ್ನಡಿಗ ನ್ಯೂಸ್ ):ಕೋವಿಡ್ ಲಸಿಕೆ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 312 ಕೋಟಿ ರೂ. ಹಣ ದುರ್ಬಳಕೆ ಮಾಡಿರುವುದನ್ನು ಖಂಡಿಸಿ ಕುಂದಾಪುರದ ಮಿನಿ ವಿಧಾನ ಸೌಧದ ಎದುರು ಗುರುವಾರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು . ಕಾರ್ಮಿಕರ ವಂತಿಗೆಯ ಹಣವನ್ನು ಕಟ್ಟಡ ಕಾರ್ಮಿಕರ ಕುಟುಂಬಗಳಿಗಾಗಿ, ಅವರ ಮಕ್ಕಳ ವಿದ್ಯಾರ್ಥಿವೇತನ, ಅಪಘಾತ, ಪೆನ್ಶನ್, ಆರೋಗ್ಯಕ್ಕಾಗಿ ಮೀಸಲಿಟ್ಟಿರುವ ಹಣವನ್ನು ರಾಜ್ಯ ಸರ್ಕಾರ ಕೋವಿಡ್ ಲಸಿಕೆ ಹೆಸರಲ್ಲಿ ದುರ್ಬಳಕೆ ಮಾಡಲು ಹೊರಟಿದೆ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಸಂಗ್ರಹವಾಗಿರುವ ಹಣ ಯಾವುದೇ ಕಾರಣಕ್ಕೂ ಆಡಳಿತ ನಡೆಸುವ ಸರ್ಕಾರಗಳು ಇತರ ಉದ್ದೇಶಗಳಿಗೆ ಬಳಸಬಾರದು ಎಂಬ ಸುಪ್ರೀಂ ಕೋರ್ಟ್ನ ಸ್ಪಷ್ಟ ನಿರ್ದೇನವಿದ್ದರೂ ರಾಜ್ಯ ಸರ್ಕಾರದ ಮಂತ್ರಿಗಳು, ಕಾರ್ಮಿಕ ಸಚಿವರು, ಕಲ್ಯಾಣ ಮಂಡಳಿಯ ಅಧಿಕಾರಿಗಳು ಸುಪ್ರೀಂ ಕೋರ್ಟ್ ತೀರ್ಪನ್ನು ಸ್ಪಷ್ಟ ಉಲ್ಲಂಘನೆ ಮಾಡಿ ಅನ್ಯ ಉದ್ದೇಶಗಳಿಗಾಗಿ ಬಳಸುತ್ತಿರುವುದು ಖಂಡನೀಯ. ಒಂದು ಲಸಿಕೆಗೆ 780 ರೂ ಕೊಟ್ಟು ಖಾಸಗಿ ಆಸ್ಪತರೆಯವರಿಗೆ ಖರೀದಿ ಮಾಡಲು ಕೊಡುತ್ತಿದ್ದಾರೆ. ಇದನ್ನು ತಕ್ಷಣವೇ ತಡೆಹಿಡಿಯಬೇಕು.ಪ್ರತಿಭಟನಾ ಕಾರರು ಆಗ್ರಹಿಸಿದರು . ಪ್ರತಿಭಟನೆಯಲ್ಲಿ ಕಟ್ಟಡ ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷ ಯು. ದಾಸ ಭಂಡಾರಿ, ಮುಖಂಡರಾದ ಸಂತೋಷ ಹೆಮ್ಮಾಡಿ, ಜಗದೀಶ್ ಆಚಾರ್, ಅರುಣ ಕುಮಾರ್, ರೇಣುಕಾ, ನೀಲಾ, ವಿಜೇಂದ್ರ ಕೋಣಿ ಮುಂದಾದವರು ಭಾಗವಹಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.