ಒಮಾನ್(ವಿಶ್ವಕನ್ನಡಿಗ ನ್ಯೂಸ್): ಸಮಸ್ತ ಕೇರಳ ಜಂಇಯತುಲ್ ಉಲಮಾ ಸದಸ್ಯರು, ಕೊಡಗು ಜಿಲ್ಲಾ ಸಂಯುಕ್ತ ಜಮಾಅತ್ ಸಹಾಯಕ ಖಾಝಿ , ಸುನ್ನೀ ಜಂಇಯತುಲ್ ಉಲಮಾ ಕರ್ನಾಟಕ ಪ್ರಧಾನ ಕಾರ್ಯದರ್ಶಿ , ಕರ್ನಾಟಕ ಮುಸ್ಲಿಂ ಜಮಾಅತ್ ಉಪಾಧ್ಯಕ್ಷರು, ಪ್ರಮುಖ ವಿದ್ವಾಂಸರು , ಹಲವಾರು ಪಂಡಿತರನ್ನು ಸಮುದಾಯಕ್ಕೆ ಅರ್ಪಿಸಿದ ಶೈಖುನಾ ಅಲ್ ಹಾಜ್ ಎಡಪ್ಪಾಲಂ ಮಹಮ್ಮೂದ್ ಮುಸ್ಲಿಯಾರ್ ಇವರ ಹೆಸರಿನಲ್ಲಿ ಕರ್ನಾಟಕ ಕಲ್ಚರಲ್ ಫೌಂಡೇಶನ್ ಒಮಾನ್ ರಾಷ್ಟ್ರೀಯ ಸಮಿತಿಯ ವತಿಯಿಂದ ಯಾಸೀನ್ ಹಾಗೂ ತಹ್ಲೀಲ್ ಸಮರ್ಪಣಾ ಕಾರ್ಯಕ್ರಮವು ಸೊಹಾರ್ ನಲ್ಲಿ ನಡೆಯಿತು.
ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಜನಾಬ್ ಅಯ್ಯೂಬ್ ಕೋಡಿ ಇವರ ಅಧ್ಯಕ್ಷತೆಯಲ್ಲಿ , ಸಂಘಟನಾ ಅಧ್ಯಕ್ಷ ಸಯ್ಯಿದ್ ಆಬಿದ್ ಅಲ್ ಹೈದ್ರೋಸಿ ಕೊಡಗು ಇವರ ನೇತೃತ್ವದಲ್ಲಿ ಸಂದರ್ಭೋಚಿತವಾಗಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಕೆಸಿಎಫ್ ಒಮಾನ್ ಕೋಶಾಧಿಕಾರಿ ಜನಾಬ್ ಆರಿಫ್ ಕೋಡಿ, ಪ್ರಧಾನ ಕಾರ್ಯದರ್ಶಿ ಸಾದಿಕ್ ಹಾಜಿ ಸುಳ್ಯ, ಸಾಂತ್ವನ ವಿಭಾಗದ ಅಧ್ಯಕ್ಷ ಇಬ್ರಾಹಿಂ ಹಾಜಿ ಅತ್ರಾಡಿ, ಕಾರ್ಯದರ್ಶಿ ಇಕ್ಬಾಲ್ ಎರ್ಮಾಲ್,ಸಂಘಟನಾ ಕಾರ್ಯದರ್ಶಿ ಸಂಶುದ್ದೀನ್ ಪಾಲ್ತಡ್ಜ, ಮೀಡಿಯಾ ವಿಭಾಗದ ಕಾರ್ಯದರ್ಶಿ ಸಿದ್ದೀಕ್ ಮಾಂಬ್ಲಿ ಸುಳ್ಯ, ರಾಷ್ಟ್ರೀಯ ಸಮಿತಿಯ ಸದಸ್ಯರಾದ ಅಬ್ಬಾಸ್ ಮರ್ಕಡ ಸುಳ್ಯ, ಸೊಹಾರ್ ಝೋನ್ ಅಧ್ಯಕ್ಷ ಅಶ್ರಫ್ ಕುತ್ತಾರ್ ಹಾಗೂ ಸೊಹಾರ್ ಝೋನ್ ಕ್ಯಾಬಿನೆಟ್ ಸದಸ್ಯರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.