ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್ ):ಅಕ್ಟೋಬರ್ 15ರಂದು ಹಿಂದು ಜಾಗರಣಾ ವೇದಿಕೆಯಿಂದ ಆಯೋಜಿಸಲಾಗಿದ್ದ ದುರ್ಗಾ ದೌಡ್ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿರುವ ಕುರಿತು ಪ್ರಕರಣ ದಾಖಲಾಗಿದೆ .
ಅಕ್ಟೋಬರ್ 15ರಂದು ಸಂಜೆ ಉಡುಪಿ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಕಾರ್ಯಕರ್ತರು ಯಾವುದೇ ಪೂರ್ವಾನುಮತಿಯಿಲ್ಲದೆ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಿಂದ ಅಂಬಲಪಾಡಿ ಮಹಾಕಾಳಿ ಅಮ್ಮನವರ ಸನ್ನಿಧಾನದವರೆಗೆ ಪಾದಯಾತ್ರೆಯನ್ನು ನಡೆಸಿ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಬಗ್ಗೆ ಸರಕಾರ/ಜಿಲ್ಲಾಧಿಕಾರಿಯವರ ಆದೇಶವನ್ನು ಪಾಲನೆ ಮಾಡದೆ, ಆದೇಶವನ್ನು ಉಲ್ಲಂಘನೆ ಮಾಡಿರುತ್ತಾರೆ.ಎಂದು ದೂರು ದಾಖಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.