ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಕಳೆದ ರಾತ್ರಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಡಿಗೆ ಮನೆ ತೆರವು ವಿವಾದಕ್ಕೆ ಸಂಬಂಧಿಸಿ ತಂಡವೊಂದು ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆಯತ್ನ ನಡೆಸಿದ ಘಟನೆ ನಡೆದಿದೆ.
ಗಂಭೀರ ಗಾಯಗೊಂಡ ಕಾಟಿಪಳ್ಳದ 2ನೇ ಬ್ಲಾಕ್ ನಿವಾಸಿ ಮುಹಮ್ಮದ್ ಅನಸ್ (29) ಅವರು ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ನಡೆಸಿದ ಆರೋಪದಲ್ಲಿ ಕಾಟಿಪಳ್ಳ ಕೃಷ್ಣಾಪುರ ನಿವಾಸಿಗಳಾದ ಚಾರು, ರವೂಫ್, ಅಕ್ಕಿ, ಮುಸ್ತಫಾ ಹಾಗೂ ಇತರ 8 ಮಂದಿಯ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಸೇರಿದಂತೆ ಐಪಿಸಿಯ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.