ಆಂಟಿಗುವಾ (ವಿಶ್ವ ಕನ್ನಡಿಗ ನ್ಯೂಸ್) : ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಭಾರತ ಅಂಡರ್-19 ವಿಶ್ವಕಪ್ ಚಾಂಪಿಯನ್ ಪಟ್ಟಕ್ಕೇರಿದೆ. ಈ ಮೂಲಕ ಅಂಡರ್ 19 ವಿಶ್ವಕಪ್ ಇತಿಹಾಸದಲ್ಲಿ ಭಾರತ 5ನೇ ಬಾರಿ ಟ್ರೋಫಿ ಎತ್ತಿ ಹಿಡಿದಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡ 44.5 ಓವರ್ ನಲ್ಲಿ 189 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಜೇಮ್ಸ್ ರೆವ್ ನ 95 ರನ್ ಗಳು ಹಾಗೂ ಸೇಲ್ಸ್ ನೊಂದಿಗೆ 93 ರನ್ ಗಳ ಜೊತೆಯಾಟ ಇಂಗ್ಲೆಂಡ್ ಗೆ ಸಹಕಾರಿಯಾಯಿತು. ಬೌಲಿಂಗ್ ನಲ್ಲಿ ಭಾರತದ ಪರ ರಾಜ್ ಬಾವಾ ಐದು ವಿಕೆಟ್ ಪಡೆದರೆ, ರವಿ ಕುಮಾರ್ ನಾಲ್ಕು ವಿಕೆಟ್ ಪಡೆದು ಅದ್ಭುತ ಕೊಡುಗೆ ನೀಡಿದರು.
ಉತ್ತರವಾಗಿ ಬ್ಯಾಟಿಂಗ್ ನಡೆಸಿದ ಭಾರತಕ್ಕೆ ಈ ಬಾರಿಯೂ ಉಪನಾಯಕ ಶೇಕ್ ರಶೀದ್ ಅರ್ಧ ಶತಕದ ಕೊಡುಗೆ ನೀಡುವ ಮೂಲಕ ಅದ್ಭುತ ಪ್ರದರ್ಶನ ನೀಡಿದರು. ಉಳಿದಂತೆ ನಿಶಾಂತ್ ಸಿಂಧು ಕೂಡ ಅಜೇಯ 50 ರನ್ಗಳ ಕೊಡುಗೆ ನೀಡಿದರು.
ಈ ಮೂಲಕ ಭಾರತ ಈ ಪಂದ್ಯದಲ್ಲಿ ಎಲ್ಲಾ ವಿಭಾಗದಲ್ಲಿಯೂ ಇಂಗ್ಲೆಂಡ್ಗಿಂತ ಸಂಪೂರ್ಣ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇಂಗ್ಲೆಂಡ್ ಬೌಲಿಂಗ್ ದಾಳಿಯನ್ನು ಉತ್ತಮ ರೀತಿಯಲ್ಲಿ ಎದುರಿಸಿದ ಭಾರತ ತಂಡ 14 ಎಸೆತಗಳು ಬಾಕಿಯಿರುವಂತೆ ಗೆಲುವು ಸಾಧಿಸಿದೆ. ಈ ಮೂಲಕ ಅರ್ಹವಾಗಿಯೇ ಚಾಂಪಿಯನ್ ಪಟ್ಟಕ್ಕೇರಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.