ಕುವೈತ್ (ವಿಶ್ವ ಕನ್ನಡಿಗ ನ್ಯೂಸ್) ; ಕರ್ನಾಟಕದ ಶಿಕ್ಷಣ ಸಂಸ್ಥೆಯಲ್ಲಿ ಹಿಜಾಬ್ ನಿಷೇಧಕ್ಕೊಳಗಾಗಿರುವ ಭಾರತೀಯ ಮುಸ್ಲಿಂ ವಿದ್ಯಾರ್ಥಿನಿಗಳಿಗೆ ಬೆಂಬಲವಾಗಿ ಕುವೈತ್ ಮಹಿಳೆಯರು ಭಾರತೀಯ ರಾಯಭಾರ ಕಚೇರಿ ಬಳಿ ಪ್ರತಿಭಟನೆಯನ್ನು ಆಯೋಜಿಸಿದರು. ಇಸ್ಲಾಮಿಕ್ ಸಾಂವಿಧಾನಿಕ ಚಳುವಳಿಯ (ಹದಫ್) ಮಹಿಳೆಯರು ಈ ಪ್ರತಿಭಟನೆಯನ್ನು ಆಯೋಜಿಸಿದ್ದರು.
ಹಲವಾರು ಸ್ಥಳೀಯ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಎಂದು ಅರೇಬಿಕ್ ಮಾಧ್ಯಮವೊಂದು ವರದಿ ಮಾಡಿದೆ. ಭಾರತೀಯ ರಾಯಭಾರ ಕಚೇರಿಯ ಮುಂಭಾಗದ ಗ್ರೀನ್ ಐಲ್ಯಾಂಡ್ ಸ್ಟ್ಯಾಂಡ್ ನಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕುವೈತ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ತಮ್ಮ ಸಂದೇಶವನ್ನು ಭಾರತ ಸರ್ಕಾರಕ್ಕೆ ತಿಳಿಸಬೇಕು ಎಂದು ಅವರು ಒತ್ತಾಯಿಸಿದರು.
ಭಾರತ-ಕುವೈತ್ ಸಂಬಂಧಗಳು ಪ್ರಾಚೀನ ಕಾಲದಿಂದಲೂ ಇದೆ. ಕುವೈತ್ ನಲ್ಲಿ ಭಾರತೀಯರು ಅತಿ ದೊಡ್ಡ ವಿದೇಶಿ ಸಮುದಾಯವಾಗಿದೆ, ನಾವು ಭಾರತೀಯ ಸಮುದಾಯವನ್ನು ಗೌರವಿಸುತ್ತೇವೆ. ಆದರೆ ಇಸ್ಲಾಮಿಕ್ ಸಂಪ್ರದಾಯಗಳು ಮತ್ತು ನಂಬಿಕೆಗಳನ್ನು ಅನುಸರಿಸುವಂತೆ ನಾವು ಅವರನ್ನು ಒತ್ತಾಯಿಸುವುದಿಲ್ಲ. ಧಾರ್ಮಿಕ ನಂಬಿಕೆಗಳು ಮತ್ತು ಸಂಪ್ರದಾಯಗಳನ್ನು ನಿರ್ವಹಿಸಲು ಅವರು ಸ್ವತಂತ್ರರಾಗಿದ್ದಾರೆ. ಅದೇ ರೀತಿ, ಮುಸ್ಲಿಮರು ಮತ್ತು ಭಾರತದಲ್ಲಿ ಅವರ ಆಚರಣೆಗಳ ಬಗ್ಗೆ ಪರಸ್ಪರ ಗೌರವ ಮತ್ತು ಸಹಕಾರವನ್ನು ನೀಡಬೇಕೆಂದು ಪ್ರತಿಭಟನಾಗಾರರು ಒತ್ತಾಯಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.