ಉಳ್ಳಾಲ ಕೋಟೆಕಾರ್ (www.vknews.in) ; ಚೀಟ್ ಫಂಡ್ ವ್ಯವಹಾರ ಕ್ಕೆ ಸಂಬಂದಿಸಿ ಅರ್ಥಿಕ ನಷ್ಟದಿಂದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಕೋಟೆಕಾರು ಗ್ರಾಮದ ಮಾಡೂರು ಸರಕಾರಿ ಶಾಲೆಯ ಬಳಿಯ ನಿವಾಸಿ ಜಯರಾಮ ಶೆಟ್ಟಿ(71) ಆತ್ಮಹತ್ಯೆ ಮಾಡಿಕೊಂಡವರು.
ಅವರ ಮೃತದೇಹ ಇಂದು ಬೆಳಗ್ಗೆ ಮನೆಯ ಕೋಣೆಯೊಳಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪತ್ನಿ ಲೀನಾ ಜೆ. ಶೆಟ್ಟಿ ಬೆಳಗ್ಗೆ ಚಹಾ ಕೊಡಲೆಂದು ಹೋಗುವಾಗ ಪ್ರಕರಣ ಬೆಳಕಿಗೆ ಬಂದಿದೆ.
ಜಯರಾಮ್ ಶೆಟ್ಟಿ ಅವರು ಮಾಡೂರು ಬಸ್ಸು ತಂಗುದಾಣದ ಬಳಿಯ ಪಂಚಾಯತ್ ಕಟ್ಟಡದ ಅಂಗಡಿಯಲ್ಲಿ ಸೀಯಾಳ ವ್ಯಾಪಾರಿಯಾಗಿದ್ದು, ಚಿಟ್ ಫಂಡ್ ವ್ಯವಹಾರವನ್ನೂ ನಡೆಸುತ್ತಿದ್ದರೆನ್ನಲಾಗಿದೆ. ಇಬ್ಬರು ಫಂಡ್ ಹಣ ಮರಳಿಸದೆ ಮೋಸ ಮಾಡಿದ್ದರಿಂದ, ಜಯರಾಮ್ ಶೆಟ್ಟಿ ತೀರ ನಷ್ಟ ಅನುಭವಿಸಿದ್ದು, ಇದೇ ಚಿಂತೆಯಲ್ಲೇ ಅವರು ನೇಣು ಬಿಗಿದು ಆತ್ಮ ಹತ್ಯೆಗೈದಿರುವುದಾಗಿ ಅವರ ಪತ್ನಿ ಕೋಟೆಕಾರ್ ಗ್ರಾಪಂ ಮಾಜಿ ಸದಸ್ಯೆ ಲೀನಾ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.