ಮಾಡನ್ನೂರು (ವಿಶ್ವ ಕನ್ನಡಿಗ ನ್ಯೂಸ್) : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನೂರುಲ್ ಇಸ್ಲಾಂ ಸೆಕೆಂಡರಿ ಮದ್ರಸ ಮಾಡನ್ನೂರು ಇದರ ವಿದ್ಯಾರ್ಥಿ ಸಂಘಟನೆಯಾದ ಎಸ್.ಕೆ.ಎಸ್.ಬಿ.ವಿ. ಆಶ್ರಯದಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಪ್ರಸ್ತುತ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಸೇರಿ ಗಿಡ ನೆಟ್ಟರು. ಪರಿಸರ ಸಂರಕ್ಷಣೆಗೆ ಇಸ್ಲಾಂ ಧರ್ಮವು ನೀಡಿದ ಪ್ರಾಧಾನ್ಯತೆಯನ್ನು ವಿವರಿಸಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು. ‘ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ’ ಎಂದು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಮದ್ರಸ ಮುಖ್ಯೋಪಾಧ್ಯಾಯರಾದ ಅಮೀರ್ ಅರ್ಶದಿ ಸ್ವಾಗತಿಸಿದರು. ಮದ್ರಸ ಅಧ್ಯಾಪಕರುಗಳಾದ ಸಿರಾಜುದ್ದೀನ್ ಫೈಝಿ, ಇಬ್ರಾಹೀಂ ಝುಹ್ರೀ ,ಇಬ್ರಾಹೀಂ ಸಅದಿ, ಶಾಹುಲ್ ಹಮೀದ್ ಫೈಝಿ ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.