ಲಖ್ನೋ(ವಿಶ್ವಕನ್ನಡಿಗ ನ್ಯೂಸ್): ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮಹಮ್ಮದ್ ಅವರ ಕುರಿತು ನೀಡಿದ ನಿಂದನಾತ್ಮಕ ಹೇಳಿಕೆಯ ವಿರುದ್ಧ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಒಂದು ದಿನದ ಬಳಿಕ, ಉತ್ತರ ಪ್ರದೇಶ ಪೊಲೀಸರು ಸಹರಾನ್ಪುರದಲ್ಲಿ ಪ್ರತಿಭಟನಾಕಾರರ ಮನೆಗಳನ್ನು ಬುಲ್ಡೋಝರ್ ಬಳಸಿ ನೆಲಸಮಗೊಳಿಸಿದ್ದಾರೆ ಎಂದು Ndtv.com ವರದಿ ಮಾಡಿದೆ.
ಸಹರಾನ್ ಪುರದಲ್ಲಿ ಶಾಂತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಕದಡಿದ್ದಕ್ಕಾಗಿ ಇದುವರೆಗೆ 64 ಜನರನ್ನು ಬಂಧಿಸಲಾಗಿದೆ.
ಸ್ಥಳೀಯ ಮುಝಮ್ಮಿಲ್ ಮತ್ತು ಅಬ್ದುಲ್ ವಾಕಿರ್ ಅವರ ನಿವಾಸಗಳನ್ನು ತಲುಪಿದ ಪೊಲೀಸರು ಅಕ್ರಮ ನಿರ್ಮಾಣಗಳು ಎಂದು ಆರೋಪಿಸಿ ಅವರ ಮನೆಗಳ ಭಾಗಗಳನ್ನು ನೆಲಸಮಗೊಳಿಸಿದ್ದಾರೆ. ಪೋಲೀಸರು ಕಾವಲು ನಿಂತು ಮನೆಗಳನ್ನು ಧ್ವಂಸಗೊಳಿಸುತ್ತಿರುವ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪ್ರವಾದಿ ನಿಂದನೆ ವಿವಾದವು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರಿ ಚರ್ಚೆಯಾಗುತ್ತಿದ್ದು, ಇದೀಗ ದಿನದಿಂದ ದಿನಕ್ಕೆ ಮುಸ್ಲಿಮರ ಮೇಲೆ ಅಕ್ರಮವೆಸಗುವುದು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ರಾಜ್ಯದಲ್ಲಿ ಇದುವರೆಗೆ 230 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಏಳು ಜಿಲ್ಲೆಗಳಲ್ಲಿ 11 ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.
ಎನ್ಡಿಟಿವಿಯೊಂದಿಗೆ ಮಾತನಾಡಿದ ಯುಪಿ ಪೊಲೀಸ್ನ ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್, ರಾಜ್ಯದಲ್ಲಿ ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.