ಬೆಂಗಳೂರು (www.vknews.in) : ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಪ್ರಸ್ತಾಪ ಇಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ವಿದ್ಯುತ್ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಸೂಚನೆ ನೀಡಿಲ್ಲ. ದರ ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ ಎಂದು ತಪ್ಪು ಸಂದೇಶ ರವಾನೆಯಾಗಿದೆ. ಈ ಬಗ್ಗೆ ಕೆಲವು ಕಡೆಗಳಲ್ಲಿ ತಪ್ಪು ಸಂದೇಶ ರವಾನೆಯಾಗಿದೆ. ಆದರೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪ ಇಲ್ಲ. ವರ್ಷದಲ್ಲಿ ಒಮ್ಮೆ ಮಾತ್ರ ವಿದ್ಯುತ್ ದರ ಪರಿಷ್ಕರಣೆ ಮಾಡಲಾಗುತ್ತದೆ. ಹೀಗಾಗಿ ದರ ಹೆಚ್ಚಳದ ಬಗ್ಗೆ ಯಾವುದೇ ಆತಂಕ ಬೇಡ ಎಂದು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.