ಮೃತಪಟ್ಟ ಬಾಲಕ ಸುದಾನ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ..
ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ನಗರದ ಬೊಳುವಾರಿನಲ್ಲಿ ವಸತಿ ಸಮುಚ್ಚಯದ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದ 9ನೇ ತರಗತಿ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಪುತ್ತೂರು ಸುದಾನ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಶಾನ್ ರೈ, ಮೃತ ಬಾಲಕ. ನಿನ್ನೆ ಸಂಜೆ ಬಾಲಕ ವಸತಿ ಸಮುಚ್ಚಯದ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದ. ತಕ್ಷಣ ಸ್ಥಳೀಯರು ಬಾಲಕನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತಂದಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ರಾತ್ರಿ ವೇಳೆಗೆ ಬಾಲಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.