ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಾದ್ಯಂತ ಹೇರಿದ್ದ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆ. ಆದರೆ ಸೆಕ್ಷನ್ 144 ಅನ್ನು ಆಗಸ್ಟ್ 14 ಮಧ್ಯರಾತ್ರಿಯವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಶಸ್ತ್ರಾಸ್ತ್ರಗಳನ್ನು ಒಯ್ಯುವುದು, ಸಾರ್ವಜನಿಕ ಮೆರವಣಿಗೆಗಳು, ಪ್ರತಿಕೃತಿಗಳನ್ನು ಸುಡುವುದು ಅಥವಾ ಪ್ರತಿಭಟನೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅಂಗಡಿಗಳ ಮುಚ್ಚುವಿಕೆಯ ಮೇಲಿನ ಎಲ್ಲಾ ನಿರ್ಬಂಧಗಳನ್ನು ಸಡಿಲಿಸಿದ್ದಾರೆ. ಮದ್ಯದಂಗಡಿಗಳು ಸೇರಿದಂತೆ ಎಲ್ಲಾ ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಬಹುದು. ಅಂಗಡಿ ಮುಚ್ಚುವಿಕೆಯ ಎಲ್ಲಾ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.