ಹುಬ್ಬಳ್ಳಿ (ವಿಶ್ವ ಕನ್ನಡಿಗ ನ್ಯೂಸ್) : ನಗರದ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಕ್ರಿಶ್ಚಿಯನ್ ಸಮುದಾಯವು ತಮ್ಮ ಹಬ್ಬಗಳಿಗೂ ಈದ್ಗಾದಲ್ಲಿ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ಪೌರಾಯುಕ್ತರಿಗೆ ಮನವಿ ಪತ್ರವನ್ನು ಸಲ್ಲಿಸಿದೆ.
ಈ ಮಧ್ಯೆ, ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿದ ಧಾರವಾಡ ಜಿಲ್ಲಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಅಂಜುಮನ್ ಇ ಇಸ್ಲಾಂ ಟ್ರಸ್ಟ್ ಹೈ ಕೋರ್ಟ್ ಮೊರೆ ಹೋಗಿತ್ತು. ಹೈಕೋರ್ಟ್, ಜಿಲ್ಲಾ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದೆ. ಇದನ್ನು ಪ್ರಶ್ನಿಸಿ ಅಂಜುಮನ್ ಇ ಇಸ್ಲಾಂ ಟ್ರಸ್ಟ್ ಸುಪ್ರೀಂಕೋರ್ಟ್ ಮೊರೆ ಹೋಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.