ಕೋಲಾರ ( ವಿಶ್ವ ಕನ್ನಡಿಗ ನ್ಯೂಸ್ ): ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಕಾರ್ಮಿಕ ಇಲಾಖೆಯ ಸಹಯೋಗದಲ್ಲಿ ಗುರುವಾರ ನಗರದ ಪತ್ರಕರ್ತರ ಭವನದಲ್ಲಿ ಪತ್ರಕರ್ತರು ಮತ್ತು ಪತ್ರಿಕಾ ಸಂಸ್ಥೆಗಳ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಹಾಗೂ ಪತ್ರಿಕಾ ವಿತರಕರುಗಳಿಗೆ ಇ-ಶ್ರಮ್ ಕಾರ್ಡ್ ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಕಾರ್ಡ್ ಗಳನ್ನು ಉಚಿತವಾಗಿ ನೊಂದಣಿ ಮಾಡಿಸಿ ಸ್ಥಳದಲ್ಲಿಯೇ ವಿತರಿಸುವ ಕಾರ್ಯಕ್ರಮವನ್ನು ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿತ್ತು. ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ ಪತ್ರಕರ್ತರಾದ ಜೆ.ಜಿ.ಶ್ರೀನಿವಾಸಮೂರ್ತಿ, ವೆಂಕಟೇಶ್, ಸರ್ವಜ್ಞಮೂರ್ತಿ ಅವರಿಗೆ ಇ-ಶ್ರಮ್ ವಿಮಾ ಕಾರ್ಡ್ ಮತ್ತು ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಗಳನ್ನು ವಿತರಿಸಲಾಯಿತು. ಇ-ಶ್ರಮ್ ಕಾರ್ಡ್ 86 ಹಾಗೂ ಆಯುಷ್ಮಾನ್ ಭಾರತ್ 156 ಆರೋಗ್ಯ ಕಾರ್ಡುಗಳನ್ನು ನೊಂದಾಯಿಸಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಕೆ.ಎಸ್.ಗಣೇಶ್, ನಿಕಟಪೂರ್ವ ಅಧ್ಯಕ್ಷ ವಿ.ಮುನಿರಾಜು, ಹಿರಿಯ ಪತ್ರಕರ್ತರಾದ ಅಬ್ಬಣಿಶಂಕರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಶಬಾನಾ ಅಜ್ಮಿ, ಕಾರ್ಮಿಕ ನಿರೀಕ್ಷಕರಾದ ರಾಜೇಶ್ವರಿ ಕೆ, ಕಾರ್ಮಿಕ ಇಲಾಖೆಯ ಸಿಬ್ಬಂದಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.