ಶಿಡ್ಲಘಟ್ಟ,(ವಿಶ್ವ ಕನ್ನಡಿಗ ನ್ಯೂಸ್): ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರವೂ ಸಹಿತ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗಿದೆ ಜಲಮೂಲಗಳಾದ ಕೆರೆ-ಕುಂಟೆಗಳನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಸರ್ಕಾರ ತ್ವರಿತವಾಗಿ ಕ್ರಮ ಕೈಗೊಳ್ಳಬೇಕೆಂದು ಶಾಸಕ ವಿ.ಮುನಿಯಪ್ಪ ಆಗ್ರಹಿಸಿದರು.
ತಾಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ಗುಟ್ಟೂರು ಗ್ರಾಮದಲ್ಲಿ 8.5 ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸಿರುವ ಅಮೃತ ಭವನ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರವು ಅನೇಕ ಯೋಜನೆಗಳನ್ನು ರೂಪಿಸುತ್ತದೆ. ಅದಕ್ಕೆ ಪೂರಕವಾದ ಅನುದಾನವನ್ನು ಸಕಾಲದಲ್ಲಿ ಬಿಡುಗಡೆ ಮಾಡುತ್ತಿಲ್ಲ ಇದರಿಂದ ಅಭಿವೃಧ್ಧಿ ಕುಂಠಿತಗೊಳ್ಳುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ ಜಲ ಮೂಲಗಳಾದ ಕೆರೆ-ಕುಂಟೆಗಳ ಸ್ಥಿತಿಗಳನ್ನು ಅವಲೋಕನ ಮಾಡಬೇಕು ಯಾವುದಾರೂ ಕೆರೆ ಶಿಥಿಲ ವ್ಯವಸ್ಥೆಯಲ್ಲಿದ್ದರೆ ಅದನ್ನು ಆದ್ಯತೆ ಮೇರೆಗೆ ಕೆರೆಯನ್ನು ಭದ್ರಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಅನೇಕ ಕೆರೆಗಳು ತುಂಬಿ ಕೋಡಿ ಹರಿಯಬೇಕಿತ್ತು. ಮತ್ತು ಅಂತರ್ಜಲ ಮಟ್ಟ ಇನ್ನಷ್ಟು ಹೆಚ್ಚಬೇಕಿತ್ತು. ಆದರೆ ಕೆರೆಗಳ ಹೂಳನ್ನು ತೆಗೆದಿಲ್ಲ. ರಾಜಕಾಲುವೆಗಳ ಒತ್ತುವರಿ ತೆರವು ಇನ್ನಿತರೆ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಕ್ಷೇತ್ರದ ಮತದಾರರು ಜನಪ್ರತಿನಿಧಿಗಳನ್ನು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದ ಶಾಸಕರು ಗ್ರಾಮದಲ್ಲಿ ಮೂಲ ಸೌಕರ್ಯಗಳನ್ನು ಕೈಗೊಳ್ಳಲು ನಾನು ಸಿದ್ದ. ಆದರೆ ಗ್ರಾಮಸ್ಥರೂ ಸಹ ತಮಗೆ ಅಗತ್ಯವಾದ ರಸ್ತೆ, ಚರಂಡಿ, ಕುಡಿಯುವ ನೀರಿಗಾಗಿ ಜನಪ್ರತಿನಿಧಿಗಳನ್ನು ಕೇಳುವಂತಾಗಬೇಕು, ಪ್ರಶ್ನಿಸುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಬದಲಾವಣೆ ತರಲು ಸಾಧ್ಯ ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಶಾಸಕರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ಗುಡಿಯಪ್ಪ,ಕೆಎಂಎಫ್ ನಿರ್ದೇಶಕ ಆರ್.ಶ್ರೀನಿವಾಸ್, ಮುಖಂಡರಾದ ನಿರಂಜನ್, ಸಂಘದ ಅಧ್ಯಕ್ಷ ಬೈರಾರೆಡ್ಡಿ, ಸಿಇಒ ಪವನ್, ನಿರ್ದೇಶಕರಾದ ರತ್ನಮ್ಮ, ರಾಜಣ್ಣ, ಮುನಿಬೈರಪ್ಪ ಮತ್ತಿತರರು ಉಪಸ್ಥಿತರಿದ್ದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.