ಬೆಳ್ಳಾರೆ (ವಿಶ್ವ ಕನ್ನಡಿಗ ನ್ಯೂಸ್) : ಕಾಣಿಯೂರಿನಲ್ಲಿ ಇಬ್ಬರು ಬಟ್ಟೆ ವ್ಯಾಪಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಪುನಿತ್, ರಾಜು, ಪ್ರಸಾದ್, ಕಿಶೋರ್, ಭವಿತ್, ರಂಜಿತ್ ಎಂದು ಗುರುತಿಸಲಾಗಿದೆ.
ಆರೋಪಿಗಳ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 144, 341, 504, 323, 324, 427, 149ರಡಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ರಮೀಝುದ್ದೀನ್ ಮತ್ತು ರಫೀಕ್ ವಿರುದ್ಧ ಪರಿಶಿಷ್ಟ ಜಾತಿ, ಪಂಗಡ ತಡೆ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 448, 354, 341ರಡಿ ಪ್ರಕರಣ ದಾಖಲಿಸಲಾಗಿದೆ. ಈ ಇಬ್ಬರು ಆರೋಪಿಗಳು ಆಸ್ಪತ್ರೆಯಲ್ಲಿದ್ದು, ಪೊಲೀಸ್ ನಿಗಾದಲ್ಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.