ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದ್ದಾರೆ. ಏಕ ನಾಗರಿಕ ಸಂಹಿತೆ ಜಾರಿ ಮಾಡುತ್ತೇವೆ ಎಂದು ಬಿಜೆಪಿ ಬಡಾಯಿ ಕೊಚ್ಚಿಕೊಳ್ಳುತ್ತಿದೆ, ಅವರು ಅದನ್ನು ಮಾಡವುದಿಲ್ಲ ಎಂದು ಅವರು ಹೇಳಿದ್ದಾರೆ.
ಗುಜರಾತ್ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಬಿಜೆಪಿ ಏಕೆ ಪ್ರಯತ್ನಿಸುತ್ತಿಲ್ಲ, ಏಕರೂಪ ನಾಗರಿಕ ಸಂಹಿತೆಯು ಸರ್ಕಾರದ ಜವಾಬ್ದಾರಿಯಾಗಿದೆ. ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸುವ ಮೂಲಕ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಬೇಕು. ಉತ್ತರಾಖಂಡ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಇದೇ ಭರವಸೆ ನೀಡಿದ್ದು, ಅದನ್ನು ಈಡೇರಿಸಿಲ್ಲ ಎಂದು ಕೇಜ್ರಿವಾಲ್ ಲೇವಡಿ ಮಾಡಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.