ಟೊರೊಂಟೊ (ವಿಶ್ವ ಕನ್ನಡಿಗ ನ್ಯೂಸ್) : ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ತನ್ನ ಬೈಸಿಕಲ್ ನಲ್ಲಿ ರಸ್ತೆ ದಾಟುತ್ತಿದ್ದಾಗ ಪಿಕಪ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತನನ್ನು ಹರಿಯಾಣದ ಕರ್ನಾಲ್ ನಿವಾಸಿ ಕಾರ್ತಿಕ್ ಸೈನಿ (20) ಎಂದು ಗುರುತಿಸಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಡಿಕ್ಕಿ ಹೊಡೆದ ನಂತರ ಟ್ರಕ್ ಕಾರ್ತಿಕ್ ನನ್ನು ಬೈಸಿಕಲ್ ನಲ್ಲಿ ಸ್ವಲ್ಪ ದೂರ ಎಳೆದೊಯ್ದಿದೆ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೈನಿ ಆಗಸ್ಟ್ 2021 ರಲ್ಲಿ ಕೆನಡಾಕ್ಕೆ ಆಗಮಿಸಿದರು. ಅವರು ಕೆನಡಾದ ಶೆರಿಡನ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ. ಶೀಘ್ರದಲ್ಲೇ ಶವವನ್ನು ಊರಿಗೆ ತರಲಾಗುವುದು ಎಂದು ಸಂಬಂಧಿಕರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.