ರಿಯಾದ್ (ವಿಶ್ವ ಕನ್ನಡಿಗ ನ್ಯೂಸ್) : ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಸೌದಿ ಅರೇಬಿಯಾ ಎಚ್ಚರಿಕೆ ನೀಡಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ತಜ್ಞರು ಸಲಹೆ ನೀಡಿದ್ದಾರೆ. ಭಾರೀ ಮಳೆ ಮತ್ತು ಪ್ರವಾಹದ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಗುಡುಗು ಸಹಿತ ಮಳೆ ಮತ್ತು ಹಠಾತ್ ಪ್ರವಾಹದ ಸಾಧ್ಯತೆಯ ಹಿನ್ನೆಲೆಯಲ್ಲಿ ಅಧಿಕಾರಿಗಳು ನೀಡಿರುವ ಸೂಚನೆಗಳನ್ನು ಪಾಲಿಸುವಂತೆ ವಿನಂತಿಸಿದ್ದಾರೆ. ಮಕ್ಕಾ, ಮದೀನಾ, ತಬೂಕ್, ಹೈಲ್, ಅಲ್ ಜೌಫ್ ಮತ್ತು ಉತ್ತರ ಗಡಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ಪ್ರಾಂತ್ಯ, ಅಲ್ ಖಾಸಿಮ್, ರಿಯಾದ್, ಅಸಿರ್, ಜಝಾನ್, ಅಲ್ ಬಹಾ ಮೊದಲಾದೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ದೇಶದಲ್ಲಿ ಪ್ರವಾಹದ ಭೀತಿಯ ನಡುವೆ ಉದ್ದೇಶಪೂರ್ವಕವಾಗಿ ನದಿಗಳು ಮತ್ತು ಕಣಿವೆಗಳನ್ನು ದಾಟುವವರಿಗೆ ದಂಡ ವಿಧಿಸಲಾಗುವುದು ಎಂದು ಸೌದಿ ಜನರಲ್ ಡಿಪಾರ್ಟ್ಮೆಂಟ್ ಆಫ್ ಟ್ರಾಫಿಕ್ ಪ್ರಕಟಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.